ಗೃಹ ಲಕ್ಷ್ಮೀ ಯೋಜನೆ ಹಣದಿಂದ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆ

ರಾಮದುರ್ಗ: ಗೃಹಲಕ್ಷ್ಮೀ ಯೋಜನೆಯ 10 ತಿಂಗಳ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದು, ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಜನಸಾಮಾನ್ಯರಿಗೆ ಲಾಭದಾಯಕವಾಗಿದೆ.
ರಾಮದುರ್ಗದ ಮನಿಹಾಳ ಗ್ರಾಮದ ಸಕ್ಕುಬಾಯಿ ಈರಣ್ಣ ಕರದಿನ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರು. ಬಲಗಣ್ಣಿನಲ್ಲಿ ಪೊರೆ ಬಂದಿದ್ದ ಕಾರಣ ಶಸ್ತ್ರಚಿಕಿತ್ಸೆ ಅನಿವಾರ್ಯ ಆಗಿತ್ತು. ಹಣಕಾಸಿನ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಸುಮ್ಮನಿದ್ದರು.
ಕಳೆದ 10 ತಿಂಗಳಿಂದ ರಾಜ್ಯ ಸರ್ಕಾರದಿಂದ ಬರುತ್ತಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು, ಕಳೆದ ವಾರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ರಾಮದುರ್ಗದ ಡಾ.ವಿಜಯ್ ಸುಲ್ತಾನ್ ಪುರ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಇದರಿಂದಾಗಿ ಇದೀಗ ತಮ್ಮ ಕಣ್ಣಿನ ಸಮಸ್ಯೆಯಿಂದ ಅವರು ಮುಕ್ತರಾಗಲಿದ್ದಾರೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068