ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ಮಹಿಳೆ ಚಿರತೆ ದಾಳಿಗೆ ಬಲಿ!
ಬೆಂಗಳೂರು: ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ತೆರಳಿದ್ದ ಮಹಿಳೆಯೊಬ್ಬರು ಚಿರತೆ ದಾಳಿಗೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ತಪ್ಪಲಿನ ಕಂಬಾಳು ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಗೊಲ್ಲರ ಹಟ್ಟಿಯ ಕರಿಯಮ್ಮ(55) ಮೃತಪಟ್ಟ ಮಹಿಳೆಯಾಗಿದ್ದಾರೆ. ನಿನ್ನೆ ರಾತ್ರಿ ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ಕರಿಯಮ್ಮ ಚಿರತೆ ದಾಳಿಗೆ ಬಲಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಗೆ ಮಹಿಳೆ ಬಲಿಯಾಗಿರುವ ಈ ಭಾಗದ ಜನರು ಆತಂಕದಲ್ಲಿದ್ದಾರೆ.
ಸದ್ಯ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: