ಜಿಟಿ ಮಾಲ್ ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವು!

20/10/2025
ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಾಲ್ ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಇದು ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದಿರೋದೋ ಎನ್ನುವ ಸ್ಪಷ್ಟನೆ ಲಭ್ಯವಾಗಿಲ್ಲ, ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಲಾಗುತ್ತಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ಹಿನ್ನೆಲೆ ಮಾಲ್ ಗೆ ಸಾರ್ವಜನಿಕರ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD