ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು! - Mahanayaka
1:19 AM Tuesday 27 - February 2024

ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು!

sujith
15/11/2023

ಪುತ್ತೂರು:  ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಇರ್ದೆಯ ಬೆಂದ್ರ್‌ ತೀರ್ಥ ಬಳಿ ನಡೆದಿದೆ.

ಒಳತ್ತಡ್ಕ ದೇವಸ್ಯ ನಿವಾಸಿ ಜಿನ್ನಪ್ಪ ಗೌಡ ಎಂಬವರ ಪುತ್ರ ಸುಜಿತ್(27)‌ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು, ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಜಿತ್‌ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ.

ಹೊಳೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ, ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ತಕ್ಷಣವೇ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಗಿದೆ. ಆದ್ರೆ ಅದಾಗಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ