ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು! - Mahanayaka
12:16 AM Wednesday 12 - November 2025

ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು!

shamim
16/01/2025

ಮಂಗಳೂರು: ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಫಳ್ನೀರ್ ನಲ್ಲಿ ಜನವರಿ 15ರಂದು ನಡೆದಿದೆ.

ಅತ್ತಾವರ ಐವರಿ ಟವರ್ ನಿವಾಸಿ, ಅಡ್ಡೂರು ಮೂಲದ ಶರೀಫ್ ಅವರ ಪುತ್ರ ಶಮೀಮ್(20) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ತನ್ನ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್  ಆಟವಾಡುತ್ತಿದ್ದ ವೇಳೆ ಏಕಾಏಕಿ ಕೋರ್ಟ್ ಮೇಲೆಯೇ ಶಮೀಮ್ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಶಮೀಮ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.  ಶಮೀಮ್ ಅಲೋಶಿಯಸ್ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ