ಕಾಫಿನಾಡ ಸೌಂದರ್ಯ ಸವಿಯಲು ಬಂದಿದ್ದ ಯುವಕ ಹೃದಯಾಘಾತಕ್ಕೆ ಬಲಿ

Mahanayaka –ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿದೆ. ಈ ನಡುವೆ ಕಾಫಿನಾಡ ಸೌಂದರ್ಯ ಸವಿಯಲು ಬಂದಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಮೃತಪಟ್ಟ ಯುವಕನನ್ನು ರಾಹುಲ್ ಎಂದು ಗುರುತಿಸಲಾಗಿದೆ. ಕಳೆದ 2 ದಿನಗಳ ಹಿಂದೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದ ಯುವಕ, ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು ತಾಲೂಕಿನ ನಲ್ಲೂರು ಗ್ರಾಮಕ್ಕೆ ಆಗಮಿಸಿದ್ದ ರಾಹುಲ್ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ. ಮಾಹಿತಿಗಳ ಪ್ರಕಾರ ಯುವಕನಿಗೆ ಮೂರ್ಚೆ ರೋಗವಿದ್ದು, ಬೆಳಗ್ಗೆಯಿಂದ ರೂಮಿನಿಂದ ಹೊರ ಬಂದಿರಲಿಲ್ಲ ಎನ್ನಲಾಗಿದೆ. ಮಧ್ಯಾಹ್ನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಯುವಕನ ಮೃತದೇಹ ಇರಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಬೆಂಗಳೂರಿನಿಂದ ಚಿಕ್ಕಮಗಳೂರಿನತ್ತ ಯುವಕನ ಕುಟುಂಬಸ್ಥರು ಆಗಮಿಸುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ನಲ್ಲೂರು ಗ್ರಾಮದ ಹೋಂಸ್ಟೇಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD