ಹೊಸ ವರ್ಷಾಚರಣೆಗೆ ಬರುತ್ತಿದ್ದ ಯುವಕ ಅಪಘಾತಕ್ಕೆ ಬಲಿ!
01/01/2025
ದಾವಣಗೆರೆ: ಹೊಸ ವರ್ಷ ಸಂಭ್ರಮಾಚರಣೆಗೆ ಸ್ನೇಹಿತರ ಜೊತೆಗೆ ಬೈಕ್ ನಲ್ಲಿ ಬರುತ್ತಿದ್ದ ಯುವಕ ಅಪಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ದಾವಣಗೆರೆ ನಗರದ ನೂತನ್ ಕಾಲೇಜ್ ಮುಂಭಾಗದಲ್ಲಿ ನಡೆದಿದೆ.
ರಾತ್ರಿ 1 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ಯುವಕನನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಪ್ಪಳಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: