ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು! - Mahanayaka

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು!

akanksha s nair
18/05/2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿಯೊಬ್ಬರು ಪಂಜಾಬ್ ನಲ್ಲಿ ನಿಗೂಧವಾಗಿ ಸಾವನ್ನಪ್ಪಿರುವ ಘಟನೆ  ನಿನ್ನೆ(ಮೇ 17) ಸಂಜೆ ನಡೆದಿದೆ.

ಏರೋಸ್ಪೇಸ್​​ ನ ಉದ್ಯೋಗಿಯಾಗಿರುವ ಆಕಾಂಕ್ಷಾ ಎಸ್. ನಾಯರ್(22) ಮೃತಪಟ್ಟ ಯುವತಿಯಾಗಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ 3ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ.

ಇನ್ನೂ ಮಗಳ ಸಾವಿನ ವಿಚಾರ ತಿಳಿದು ಆಕಾಂಕ್ಷಾಳ ಪೋಷಕರು ನಿನ್ನೆಯೇ ಪಂಜಾಬ್ ಗೆ ತೆರಳಿದ್ದಾರೆ. ಘಟನೆ ಸಂಬಂಧ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್​​ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕೆ ಜಪಾನ್ ​ಗೆ ಹೋಗಲು ಪ್ಲ್ಯಾನ್ ಕೂಡ ನಡೆಸಿದ್ದರು. ಇದಕ್ಕಾಗಿ ನಿನ್ನೆ ಕಾಲೇಜಿಗೆ ತೆರಳಿ ಸರ್ಟಿಫಿಕೇಟ್ ಪಡೆದುಕೊಂಡು ಬಂದಿದ್ದರು. ಈ ವಿಚಾರವನ್ನು ಫೋನ್​ ಮಾಡಿ ಆಕಾಂಕ್ಷಾ ತನ್ನ ಪೋಷಕರಿಗೂ ತಿಳಿಸಿದ್ದಳು ಎಂದು ತಿಳಿದು ಬಂದಿದೆ.

ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸೂಕ್ತ ತನಿಖೆಗೆ ಕೂಡ ಒತ್ತಾಯ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

<

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ