ಅಮಾನವೀಯ ಘಟನೆ: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಗೆ ಚುಚ್ಚುಮದ್ದು ನೀಡಿ ಅತ್ಯಾಚಾರ! - Mahanayaka

ಅಮಾನವೀಯ ಘಟನೆ: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಗೆ ಚುಚ್ಚುಮದ್ದು ನೀಡಿ ಅತ್ಯಾಚಾರ!

rajasthana
27/02/2024

ರಾಜಸ್ಥಾನ: ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯನ್ನು ಚುಚ್ಚುಮದ್ದು ನೀಡಿ ಅತ್ಯಾಚಾರ ಮಾಡಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಅತ್ಯಾಚಾರದ ಆರೋಪಿನ್ನು ಚಿರಾಗ್ ಯಾದವ್ ಎಂದು ಗುರುತಿಸಲಾಗಿದೆ. ಶ್ವಾಸಕೋಶದ ಸಮಸ್ಯೆಯ ಹಿನ್ನೆಲೆಯಲ್ಲಿ 24 ವರ್ಷ ವಯಸ್ಸಿನ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಮುಂಜಾನೆ 4 ಗಂಟೆಗೆ ಆಸ್ಪತ್ರೆಯ ನರ್ಸಿಂಗ್ ಸಹಾಯಕ ಸಿಬ್ಬಂದಿಯು ಸಂತ್ರಸ್ತೆಗೆ ಚುಚ್ಚುಮದ್ದು ನೀಡಿ ಆಕೆಯ ಪ್ರಜ್ಞೆ ತಪ್ಪಿಸಿದ್ದು, ಬಳಿಕ ಪ್ರಜ್ಞಾಹೀನಳಾಗಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿ ಸ್ಥಳದಿಂದ ತೆರಳಿದ್ದ.

ಯುವತಿಯ ಪತಿ ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಆಕೆಗೆ ಎಚ್ಚರವಾಗಿದ್ದು, ಈ ವೇಳೆ ಅತ್ಯಾಚಾರ ನಡೆದಿರುವುದು ಆಕೆಗೆ ಅರಿವಾಗಿತ್ತು. ಬಳಿಕ ನಡೆದ ಘಟನೆಯನ್ನು ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ