ಮನೆಯಲ್ಲಿ ಮಲಗಿದ್ದ ಯುವತಿಯನ್ನು ಚಾಕುವಿನಿಂದ ಇರಿದು ಕೊಂದ ಪಾಪಿ!

hubballi news
15/05/2024

ಹುಬ್ಬಳ್ಳಿ:  ಯುವತಿಯೋರ್ವಳನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಬುಧವಾರ ನಡೆದಿದೆ.

ಅಂಜಲಿ ಅಂಬಿಗೇರ(19) ಮೃತಪಟ್ಟ ಯುವತಿಯಾಗಿದ್ದಾಳೆ.  ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ, ಆಟೊ ಚಾಲಕ ಗಿರೀಶ ಸಾವಂತ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ವರದಿಗಳ ಪ್ರಕಾರ, ಅಂಜಲಿ ಮತ್ತು ಗಿರೀಶ  ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ  ನಡುವೆ ವೈಮನಸ್ಸು ಮೂಡಿತ್ತು ಎನ್ನಲಾಗಿದೆ.

ಇದರಿಂದ ಕೋಪಗೊಂಡ ಗಿರೀಶ್, ಬುಧವಾರ ಬೆಳಗಿನ ಜಾವ 5ಗಂಟೆಗೆ ಅಂಜಲಿ ಮನೆಗೆ ಹೋಗಿ ಬಾಗಿಲು ಬಡಿದಿದ್ದಾನೆ. ಯಾರೂ ಬಾಗಿಲು ತೆರೆಯದಿದ್ದಾಗ, ಮತ್ತೊಮ್ಮೆ ಜೋರಾಗಿ ಬಾಗಿಲು ಬಡಿದಿದ್ದಾನೆ. ಅಂಜಲಿ ಸಹೋದರಿ ಬಾಗಿಲು ತೆರೆದಿದ್ದರು.

ಈ ವೇಳೆ ಏಕಾಏಕಿ ಒಳಗೆ ನುಗ್ಗಿದ ಗಿರೀಶ, ಮನೆಯಲ್ಲಿ ನಿದ್ದೆ ಮಾಡುತ್ತಿದ್ದ ಅಂಜಲಿಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾನೆ. ಪರಿಣಾಮವಾಗಿ ತೀವ್ರ ರಕ್ತಸ್ರಾವವಾಗಿ  ಅಂಜಲಿ ಮೃತಪಟ್ಟಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version