ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

21/08/2023
ಮೈಸೂರು: ಯುವಕನೋರ್ವನನ್ನು ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ವಿದ್ಯಾನಗರ ಬಡವಾವಣೆಯ 4ನೇ ಕ್ರಾಸ್ ನಲ್ಲಿ ನಡೆದಿದೆ.
26 ವರ್ಷ ವಯಸ್ಸಿನ ಬಾಲರಾಜ್ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ತೇಜಸ್, ಕಿರಣ್, ಸಂಜಯ್, ಸಾಮ್ರಾಟ್ ವಿರುದ್ಧ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ…