ಎಸ್ ಸಿ, ಎಸ್ ಟಿ ಜನರ ಆಧಾರ್ ಕಾರ್ಡ್ ನಿಷ್ಕ್ರಿಯ ಮಾಡಲಾಗಿದೆ ಎಂಬ ಮಮತಾ ಬ್ಯಾನರ್ಜಿ ಆರೋಪ: ಆಧಾರ್ ಸಂಖ್ಯೆ ರದ್ದು ಮಾಡಿಲ್ಲ ಎಂದ ಯುಐಡಿಎಐ

ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್ ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆರೋಪಕ್ಕೆ ತಿರುಗೇಟು ನೀಡಿರುವ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ), ಯಾವುದೇ ಆಧಾರ್ ಸಂಖ್ಯೆಯನ್ನು ರದ್ದುಗೊಳಿಸಿಲ್ಲ ಎಂದು ಹೇಳಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಈ ಪತ್ರದಲ್ಲಿ ಈ ಕ್ರಮವನ್ನು ನೈಸರ್ಗಿಕ ನ್ಯಾಯದ ಸಂಪೂರ್ಣ ಉಲ್ಲಂಘನೆ ಎಂದು ಬಣ್ಣಿಸಿದ್ದಾರೆ.
ಆಧಾರ್ ಅನ್ನು ಸಾಮಾನ್ಯವಾಗಿ ಬಳಸುವ ಡಿಜಿಟಲ್ ಗುರುತಾಗಿ, ಹಲವಾರು ಸಬ್ಸಿಡಿಗಳು, ಪ್ರಯೋಜನಗಳು ಮತ್ತು ಸೇವೆಗಳನ್ನು ಪಡೆಯಲು ಬಳಸಲಾಗುತ್ತದೆ ಎಂದು ಯುಐಡಿಎಐ ತನ್ನ ವೆಬ್ ಸೈಟ್ ನಲ್ಲಿ ತಿಳಿಸಿದೆ.
ಆಧಾರ್ ಡೇಟಾಬೇಸ್ ನ ನಿಖರತೆಯನ್ನು ಕಾಪಾಡಿಕೊಳ್ಳಲು, ಅಧಿಕಾರಿಗಳು ದಾಖಲೆಗಳು ಮತ್ತು ಆಧಾರ್ ಮಾಹಿತಿಯನ್ನು ನವೀಕರಿಸುವ ಅಭ್ಯಾಸವನ್ನು ನವೀಕರಿಸುತ್ತಾರೆ ಎಂದು ಅದು ಹೇಳಿದೆ.
ಆಧಾರ್ ಡೇಟಾಬೇಸ್ ಅನ್ನು ನವೀಕರಿಸಲು ಕೈಗೊಳ್ಳುವ ಚಟುವಟಿಕೆಗಳ ಸಮಯದಲ್ಲಿ ಆಧಾರ್ ಸಂಖ್ಯೆ ಹೊಂದಿರುವವರಿಗೆ ಕಾಲಕಾಲಕ್ಕೆ ಸೂಚನೆಗಳನ್ನು ನೀಡಲಾಗುತ್ತದೆ. ಈ ಸಂಬಂಧ ಯಾವುದೇ ಆಧಾರ್ ಸಂಖ್ಯೆಯನ್ನು ರದ್ದುಗೊಳಿಸಲಾಗಿಲ್ಲ ಎಂದು ಯುಐಡಿಎಐ ಸ್ಪಷ್ಟಪಡಿಸಿದೆ.