ಮೂರನೇ ಮದುವೆಯಾದ ನಟ ಅಮೀರ್ ಖಾನ್ ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಜೀವ ಬೆದರಿಕೆ
ನವದೆಹಲಿ: ಬಾಲಿವುಡ್ ನ ಹಿರಿಯ ನಟ ಅಮೀರ್ ಖಾನ್ ಅವರಿಗೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಸಾಮಾಜಿಕ ಜಾಲತಾಣಗಳ ಮೂಲಕ ಜೀವ ಬೆದರಿಕೆ ಬಂದಿದೆ. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅರ್ಶು ಬಿಷ್ಣೋಯ್ ಹಾಗೂ ಟೈಸನ್ ಬಿಷ್ಣೋಯ್ ಹೆಸರಿನಲ್ಲಿ ಈ ಬೆದರಿಕೆ ಸಂದೇಶ ರವಾನೆಯಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗಷ್ಟೇ ಅಮೀರ್ ಖಾನ್ ಅವರ ಮೂರನೇ ಮದುವೆಯ ಕುರಿತು ವರದಿಗಳು ಹೊರಬಂದ ಬೆನ್ನಲ್ಲೇ ಈ ಬೆದರಿಕೆ ಬಂದಿದೆ.
“ಅಮೀರ್ ಖಾನ್ ಅವರಂತಹ ವ್ಯಕ್ತಿಗಳು ದೇಶದಲ್ಲಿ ‘ಲವ್ ಜಿಹಾದ್’ ಅನ್ನು ಉತ್ತೇಜಿಸುತ್ತಿದ್ದಾರೆ. ಇದು ನಮ್ಮ ಸಂಸ್ಕೃತಿ ಮತ್ತು ಸನಾತನ ಧರ್ಮಕ್ಕೆ ವಿರುದ್ಧವಾಗಿದೆ. ಇದನ್ನು ನಾವು ಸಹಿಸುವುದಿಲ್ಲ. ಅವರು ಶೀಘ್ರದಲ್ಲೇ ಇದರ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಕೇವಲ ಪ್ರಸಿದ್ಧಿಗಾಗಿ ಇಂತಹ ಕೃತ್ಯಗಳನ್ನು ಮಾಡುವವರನ್ನು ನಾವು ನಮ್ಮದೇ ಶೈಲಿಯಲ್ಲಿ ಮಟ್ಟ ಹಾಕುತ್ತೇವೆ ಮತ್ತು ಅವರನ್ನು ಶಾಂತಗೊಳಿಸುತ್ತೇವೆ” ಎಂದು ಆ ಪೋಸ್ಟ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಅಮೀರ್ ಖಾನ್ ಅವರಾಗಲಿ ಅಥವಾ ಅವರ ತಂಡದವರಾಗಲಿ ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಿಸಿಲ್ಲ. ಆದರೆ, ದೂರು ಬಂದ ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ತಾರೆಯರನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕುತ್ತಿರುವುದು ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























