ಮಣಿಪುರ ಹಿಂಸಾಚಾರ, ಬೆತ್ತಲೆ ಮೆರವಣಿಗೆ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ: ಕೇಂದ್ರಕ್ಕೆ ಬಿಸಿತುಪ್ಪವಾದ ವಿಪಕ್ಷಗಳು - Mahanayaka
10:54 PM Wednesday 22 - October 2025

ಮಣಿಪುರ ಹಿಂಸಾಚಾರ, ಬೆತ್ತಲೆ ಮೆರವಣಿಗೆ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ: ಕೇಂದ್ರಕ್ಕೆ ಬಿಸಿತುಪ್ಪವಾದ ವಿಪಕ್ಷಗಳು

24/07/2023

ಮಣಿಪುರ ಹಿಂಸಾಚಾರ, ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ ಖಂಡಿಸಿ ದೆಹಲಿಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಉನ್ನತ ನಾಯಕರು ಭಾಗವಹಿಸಲಿದ್ದಾರೆ.

ಮಣಿಪುರ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಹಲವು ವಿರೋಧ ಪಕ್ಷಗಳ ನಾಯಕರು ಸೋಮವಾರ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದರು.

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಮೇ 4 ರಂದು ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋವೊಂದು ಕಳೆದ ವಾರ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಮಣಿಪುರದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ