ದೆಹಲಿಯ ನೀರಿನ ಬಿಕ್ಕಟ್ಟನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ: ಎಎಪಿ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

ರಾಷ್ಟ್ರ ರಾಜಧಾನಿಗೆ ನೀರು ನೀಡುವಂತೆ ಒತ್ತಾಯಿಸಿ ಅನಿರ್ದಿಷ್ಟ ಉಪವಾಸದ ಪರಿಣಾಮವಾಗಿ ದೆಹಲಿ ಜಲ ಸಚಿವೆ ಅತಿಶಿ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮಂಗಳವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಡಳಿತಾರೂಢ ಆಮ್ ಆದ್ಮಿ ಪಕ್ಷ ತಿಳಿಸಿದೆ. ಸಚಿವೆಯನ್ನು ಲೋಕ ನಾಯಕ ಆಸ್ಪತ್ರೆಯ ತುರ್ತು ಐಸಿಯುಗೆ ದಾಖಲಿಸಲಾಗಿದೆ ಎಂದು ಪಕ್ಷವು ‘ಎಕ್ಸ್’ ಪೋಸ್ಟ್ ನಲ್ಲಿ ತಿಳಿಸಿದೆ. ಅತಿಶಿ ಜೂನ್ 21ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಜಲಸಂಪನ್ಮೂಲ ಸಚಿವೆ ಅತಿಶಿ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ಮಧ್ಯರಾತ್ರಿ 43 ಕ್ಕೆ ಮತ್ತು ಮುಂಜಾನೆ 3 ಗಂಟೆಗೆ 36 ಕ್ಕೆ ಇಳಿದಿದೆ. ನಂತರ ಎಲ್ಎನ್ಜೆಪಿ ಆಸ್ಪತ್ರೆಯ ವೈದ್ಯರು ತಕ್ಷಣ ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದರು. ಕಳೆದ ಐದು ದಿನಗಳಿಂದ ಅವರು ಏನನ್ನೂ ಸೇವಿಸಿಲ್ಲ. ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ಹರಿಯಾಣ ಸರ್ಕಾರವನ್ನು ಒತ್ತಾಯಿಸಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರನ್ನು ಎಲ್ಎನ್ಜೆಪಿಯ ತುರ್ತು ಐಸಿಯುನಲ್ಲಿ ದಾಖಲಿಸಲಾಗಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದು ಆಮ್ ಆದ್ಮಿ ಪಕ್ಷ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth