ABCD ಗೊತ್ತಿಲ್ಲದ ಇಬ್ಬರು ಇಂಗ್ಲಿಷ್ ಶಿಕ್ಷಕರ ಅಮಾನತು - Mahanayaka
11:23 PM Wednesday 15 - October 2025

ABCD ಗೊತ್ತಿಲ್ಲದ ಇಬ್ಬರು ಇಂಗ್ಲಿಷ್ ಶಿಕ್ಷಕರ ಅಮಾನತು

abcd
28/11/2021

ಸಿಂದಗಿ:  ಇಂಗ್ಲಿಷ್ ವರ್ಣಾಕ್ಷರ ಬರೆಯಲು ಬಾರದ ತಾಲೂಕಿನ ಗುಂಡಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಸಹ—ಶಿಕ್ಷಕರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.


Provided by

ಸಹ-ಶಿಕ್ಷಕ ದೌಲತ್ ದೇವಕುಳೆ ಮತ್ತು ಸಹ- ಶಿಕ್ಷಕಿ ಎಂ.ಎನ್.ರಾಂಪೂರಮಠ ಅಮಾನತುಗೊಂಡವರು ಎಂದು ತಿಳಿದು ಬಂದಿದೆ.  ABCD ಅಕ್ಷರಗಳನ್ನು ತಪ್ಪು ತಪ್ಪಾಗಿ ಬರೆಯುತ್ತಿದ್ದ ಶಿಕ್ಷಕರು, ಇದೇ ಸರಿ ಎಂದು ವಿದ್ಯಾರ್ಥಿಗಳಿಗೆ ಹೇಳುತ್ತಿದ್ದರು ಎನ್ನಲಾಗಿದೆ.

ಇನ್ನೂ ಇದನ್ನು ಪ್ರಶ್ನಿಸಿದ ಪಾಲಕರು ಹಾಗೂ ಗ್ರಾಮಸ್ಥರ ಜೊತೆಗೆ ಶಿಕ್ಷಕರು ವಾಗ್ವಾದ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.  ಇದರ ಬೆನ್ನಲ್ಲೇ ಶಿಕ್ಷರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ನೀರಲಗಿ ಅವರು ವರದಿ ಸಲ್ಲಿಸಿದ್ದರು. ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಿಕ್ಷಣ, ಆರೋಗ್ಯ, ಉದ್ಯೋಗದ ಹಕ್ಕಿಗಾಗಿ ಪ್ರಬಲ ಜನಚಳುವಳಿ ಕಟ್ಟಲು ಸಿಪಿಐ(ಎಂ) ಜಿಲ್ಲಾ ಸಮ್ಮೇಳನ ನಿರ್ಧಾರ

ರಂಗಭೂಮಿಯನ್ನೂ ಬೆನ್ನತ್ತಿದ ಕೋಮುವಾದದ ಸರಕು

ತಮ್ಮ ನೇಣು ಬಿಗಿದುಕೊಂಡಿದ್ದ ಸೀರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಅಕ್ಕಾ!

ಶಾಸಕರಿಗೇ ಅಸ್ಪೃಶ್ಯತೆ ಅನುಭವವಾಯ್ತಾ? | ಪಲ್ಲಕ್ಕಿ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೆಟ್ಟ ಅನುಭವ!

ಶಾಸಕರಿಗೇ ಅಸ್ಪೃಶ್ಯತೆ ಅನುಭವವಾಯ್ತಾ? | ಪಲ್ಲಕ್ಕಿ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೆಟ್ಟ ಅನುಭವ!

ಇತ್ತೀಚಿನ ಸುದ್ದಿ