ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮೃತದೇಹ ಸಾಗಾಟ ವೇಳೆ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ - Mahanayaka

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮೃತದೇಹ ಸಾಗಾಟ ವೇಳೆ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ

abdul rahiman
28/05/2025


Provided by

ಮಂಗಳೂರು:  ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಅಬ್ದುಲ್ ರಹಿಮಾನ್(34) ಅವರ ಮೃತದೇಹವನ್ನು ಇಂದು ಬೆಳಗ್ಗೆ  ಕುತ್ತಾರ್ ಮದನಿ ನಗರದ ಮಸೀದಿಗೆ ಸಾಗಿಸಲಾಯಿತು.

ಈ ವೇಳೆ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಸಾರ್ವಜನಿಕರ ಗುಂಪು ರಸ್ತೆ ತಡೆ ನಡೆಸಿ ಘಟನೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.  ಕುತ್ತಾರ್, ತೊಕ್ಕೊಟ್ಟು, ಪಂಪ್ ವೆಲ್ ಮಾರ್ಗವಾಗಿ ಮೃತದೇಹ ಫರಂಗಿಪೇಟೆ ತಲುಪಿದ ವೇಳೆ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಸಾರ್ವಜನಿಕರ ಗುಂಪು ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದ್ದು, ಅಮಾಯಕ ಯುವಕನ ಹತ್ಯೆಯನ್ನು ತೀವ್ರವಾಗಿ ಖಂಡಿಸಿತು. ಆಕ್ರೋಶಿತರ ಗುಂಪು ಚದುರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.

ರಹಿಮಾನ್ ಅವರ ಮೃತದೇಹವನ್ನು ಬಂಟ್ವಾಳದ ಕೊಳತ್ತಮಜಲಿನಲ್ಲಿರುವ ಮನೆಗೆ ಸಾಗಿಸಲಾಗುತ್ತಿದೆ. ನೂರಾರು ಜನರು ಮೃತದೇಹದ ಆ್ಯಂಬುಲೆನ್ಸ್ ಜೊತೆಗೆ ಸಾಗುತ್ತಿದ್ದಾರೆ. ಸ್ಥಳದಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ