ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಮಂಗಳೂರು: ಬಂಟ್ವಾಳದ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹಿಮಾನ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕೃತ್ಯದ ನಂತರ ಆರೋಪಿಗಳು ಪರಾರಿಯಾಗಿದ್ದು, ಈ ಪೈಕಿ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ವಶಕ್ಕೆ ಪಡೆಯಲಾಗಿರುವ ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದ ನಂತರ ಕರಾವಳಿಯಲ್ಲಿ ಪೊಲೀಸ್ ಇಲಾಖೆ, ಗೃಹ ಸಚಿವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಪೊಲೀಸ್ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ಕೃತ್ಯ ನಡೆದಿದೆ. ಪ್ರಚೋದನಾಕಾರಿ ಹೇಳಿಕೆ ನೀಡಿದವರನ್ನು ಬಂಧಿಸಿದ್ದರೆ, ಇಷ್ಟೊಂದು ಸಮಸ್ಯೆ ಆಗುತ್ತಿರಲಿಲ್ಲ. ಪ್ರಚೋದನಾಕಾರಿ ಹೇಳಿಕೆ ನೀಡುವವರು ಬಂಧನವಾಗಿ ಕೆಲವೇ ನಿಮಿಷಗಳಲ್ಲಿ ಜಾಮೀನಿನ ಮೂಲಕ ಹೊರ ಬರುತ್ತಿದ್ದಾರೆ ಎನ್ನುವ ಆಕ್ರೋಶಗಳು ವ್ಯಾಪಕವಾಗಿ ಕೇಳಿ ಬಂದಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD