ಕಂದಹಾರ್ ವಿಮಾನ ಹೈಜಾಕ್ ನ ಮಾಸ್ಟರ್ ಮೈಂಡ್ ಅಬ್ದುಲ್ ರೌಫ್ ಅಜರ್ ಢಮಾರ್!

ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಕಂದಹಾರ್ ವಿಮಾನ ಹೈಜಾಕ್ ನ ಮಾಸ್ಟರ್ ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಗುಪ್ತಚರ ಇಲಾಖೆ ಧೃಢಪಡಿಸಿದೆ.
ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್ ನ ಸಹೋದರನಾಗಿರುವ ಅಬ್ದುಲ್ ರೌಫ್ ಅಜರ್. ಕಂದಹಾರ್ ವಿಮಾನ ಹೈಜಾಕ್ ಮಾತ್ರವಲ್ಲದೆ, ಉರಿ, ಪುಲ್ವಾಮಾ, ಪಠಾಣ್‌ಕೋಟ್ ಭಯೋತ್ಪಾದಕ ದಾಳಿ, 2001ರ ಸಂಸತ್ ದಾಳಿ, ಅಕ್ಷರಧಾಮ ದಾಳಿಯಲ್ಲೂ ಭಾಗಿಯಾಗಿದ್ದ. ಅಜರ್, ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಆಗಿದ್ದ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಭಾರತಕ್ಕೆ ಬೇಕಾದ ಮೋಸ್ಟ್ ವಾಂಟೆಡ್ ಉಗ್ರರ ಲಿಸ್ಟ್‌ನಲ್ಲಿ ಇವನೂ ಕೂಡ ಒಬ್ಬನಾಗಿದ್ದ.
ರೌಫ್ ಅಜರ್ ಇಂಡಿಯನ್ ಏರ್ಲೈನ್ಸ್ ವಿಮಾನ ಐಸಿ-814 ಅಪಹರಣದ (IC-814 Hijacking) ಪ್ರಮುಖ ಮಾಸ್ಟರ್‌ಮೈಂಡ್. ಡಿಸೆಂಬರ್ 24, 1999 ರಂದು ಇಂಡಿಯನ್ ಏರ್ಲೈನ್ಸ್ ವಿಮಾನ ಐಸಿ814, ನೇಪಾಳದ ಕಠ್ಮಂಡುವಿನಿಂದ ದೆಹಲಿಗೆ ಆಗಮಿಸುತ್ತಿತ್ತು. 176 ಪ್ರಯಾಣಿಕರಿದ್ದ ಈ ವಿಮಾನವನ್ನು ಪಾಕ್ ಉಗ್ರಗಾಮಿ ಸಂಘಟನೆ ಹರ್ಕತ್-ಉಲ್-ಮುಜಾಹಿದ್ದೀನ್ ಉಗ್ರರು ಅಪಹರಣ ಮಾಡಿದ್ದರು. ಅಲ್ಲದೇ ಉಗ್ರ ಮೌಲಾನಾ ಮಸೂದ್ ಅಝರ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಬಿಡುಗಡೆ ಮಾಡಬೇಕೆಂದು ಬೇಡಿಕೆಯಿಟ್ಟಿದ್ದರು. ಅಂದಿನ ವಾಜಪೇಯಿ ಸರ್ಕಾರ ನಾಗರಿಕರನ್ನು ಜೀವಂತವಾಗಿ ಕರೆತರುವ ಉದ್ದೇಶದಿಂದ ಜೈಲಿನಲ್ಲಿದ್ದ ಮೂವರು ಕುಖ್ಯಾತ ಭಯೋತ್ಪಾದಕರನ್ನು ಬಿಡುಗಡೆ ಮಾಡಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: