2:23 PM Wednesday 28 - January 2026

ತನ್ನಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ

18/02/2021

ಮಂಡ್ಯ: ತನ್ನ ಅಂತ್ಯ ಸಂಸ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ಬರಬೇಕು ಇದು ನನ್ನ ಕೊನೆಯ ಆಸೆ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ  ತನ್ನ ಅಭಿಮಾನಿಯ ಕೊನೆಯ ಆಸೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಈಡೇರಿಸಿದ್ದಾರೆ.

ಕೋಡಿದೊಡ್ಡಿ ಗ್ರಾಮದ ರಾಮಕೃಷ್ಣ ವೈಯಕ್ತಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಅವರು ಬರೆದ ಡೆತ್ ನೋಟ್ ನಲ್ಲಿ ಸಿದ್ದರಾಮಯ್ಯನವರ ಹಾಗೂ ನಟ ಯಶ್ ಅವರ ಅಭಿಮಾನಿ ನಾನು ಹಾಗಾಗಿ ಇವರು ನನ್ನ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಬೇಕು. ಇದು ನನ್ನ ಕೊನೆಯ ಆಸೆ ಎಂದು ಹೇಳಿದ್ದ.

ಈ ವಿಚಾರ ತಿಳಿಯುತ್ತಿದ್ದಂತೆಯೇ ಸಿದ್ದರಾಮಯ್ಯನವರು ರಾಮಕೃಷ್ಣನ ಅಂತ್ಯಕ್ರಿಯೆಗೆ ತೆರಳಿದ್ದು, ಕೊನೆಯ ಆಸೆಯನ್ನು ಈಡೇರಿಸಿದ್ದಾರೆ. ಇದೇ ಸಂದರ್ಭದಲ್ಲಿ ಕುಟುಂಬಸ್ಥರಿಗೆ ಮಾಜಿ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಸಿದ್ದರಾಮಯ್ಯ ಜೊತೆ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ, ತಾಪಂ ಮಾಜಿ ಅಧ್ಯಕ್ಷ ತ್ಯಾಗರಾಜು ಸೇರಿದಂತೆ ಹಲವು ಮುಖಂಡರು ಅಂತಿಮ ದರ್ಶನ ಪಡೆದರು.

ಇತ್ತೀಚಿನ ಸುದ್ದಿ

Exit mobile version