ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಬಿಗ್ ರಿಲೀಫ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ(Suraj Revanna)ಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.
ಸೂರಜ್ ರೇವಣ್ಣ ವಿರುದ್ಧ ಬ್ರಿಗೇಡ್ ಖಜಾಂಚಿ ನೀಡಿದ್ದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.
ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಬೆನ್ನಲ್ಲೇ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬವರು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು. ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿ, ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬ್ಲ್ಯಾಕ್ಮೇಲ್ ಮಾಡಿದ್ದರು ಎಂದು ಶಿವಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಬೆಳವಣಿಗೆಯ ನಂತರ ಈ ಪ್ರಕರಣವನ್ನ ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD