ವಾಡಿಕೆಗಿಂತ ಹೆಚ್ಚು ಮಳೆಯಾಗಿರುವುದು ಕೃಷಿ ಚಟುವಟಿಕೆ ಆಶದಾಯಕವಾಗಿದೆ: ಸಚಿವ ಕೃಷ್ಣ ಬೈರೇಗೌಡ

ಕಲಬುರಗಿ: ಪ್ರಸಕ್ತ ವರ್ಷ ಮುಂಗಾರು ಪೂರ್ವ ಮತ್ತು ಮುಂಗಾರು ಹಂಗಾಮಿನಲ್ಲಿ ಮಳೆ ವಾಡಿಕೆಗಿಂತ ಹೆಚ್ಚಾಗಿರುವುದರಿಂದ ಕೃಷಿ ಚಟುವಟಿಕೆ ಆಶದಾಯಕವಾಗಿವೆ. ಈ ವರ್ಷ ರಾಜ್ಯದಾದ್ಯಂತ 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇದುವರೆಗೆ 33 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಇದು ಗುರಿಗೆ ಶೇ.40ರಷ್ಟು ಬಿತ್ತನೆಯಾಗಿದೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ ಕೇವಲ 8.37 ಲಕ್ಷ ಹೆಕ್ಟೇರ್ ಪ್ರದೇಶ ಮಾತ್ರ ಬಿತ್ತನೆಯಾಗಿತ್ತು ಎಂದರು.
ರಾಜ್ಯದಲ್ಲಿ ಮುಂಗಾರು ಪೂರ್ವ 115 ಮಿ.ಮೀ ಮಳೆಯಾದರೆ ಜೂನ್ ಮಾಹೆಯಲ್ಲಿ ಒಟ್ಟಾರೆ 148 ಮಿ.ಮೀ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 95 ಮಿ.ಮೀ. ಮಳೆಯಾಗಿದ್ದು, ಇದು ವಾಡಿಕೆಗ್ಗಿಂತ 40ಮಿ.ಮೀ ಹೆಚ್ಚು. ಅದೇ ರೀತಿ ಉತ್ತರ ಒಳನಾಡಿನಲ್ಲಿ 78 ಮಿ.ಮೀ. ಮಳೆ ವಾಡಿಕೆಯಾದರೆ, ಮಳೆ ಬಿದ್ದಿದ್ದು 134 ಮಿ.ಮೀ. ಇನ್ನು ಮಳೆನಾಡು, ಕರಾವಳಿಯಲ್ಲಿ ವಾಡಿಕೆಯಂತೆ ಮಳೆ ಬೀಳದಿದ್ದರೂ., ಇತ್ತೀಚಿನ 2-3 ದಿನದಲ್ಲಿ ಅಲ್ಲಿ ಮಳೆಯಾಗುತ್ತಿರುವುದರಿಂದ ಅಗತ್ಯಕ್ಕನುಗುಣವಾಗಿ ಅಲ್ಲಿ ಮಳೆಯಾಗಿದೆ ಎಂದರು.
ಹೊಸ ತಾಲೂಕುಗಳಿಗೆ ತಹಶೀಲ್ದಾರ ಕಚೇರಿ ಮಾತ್ರ ಇವೆ. ಉಳಿದ ಇಲಾಖೆಗಳ ತಾಲೂಕಾ ಕಚೇರಿ ಇಲ್ಲ. ಈ ಕಚೇರಿ ಆರಂಭ ಯಾವಾಗ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಂದಿನ 3 ವರ್ಷದಲ್ಲಿ ಹಂತ ಹಂತವಾಗಿ ತಾಲೂಕಾ ಕಚೇರಿ ಆರಂಭಿಸಲಾಗುವುದು ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97