11:55 PM Friday 19 - December 2025

ಇದ್ದಕ್ಕಿದ್ದಂತೆ ವಿಮಾನ ಪ್ರಯಾಣಿಕರಿಗೆ ಶುರುವಾಯಿತು ಭಯ: ದಿಲ್ಲಿ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ಫ್ಲೈಟ್

16/09/2023

ಲಕ್ನೋದಿಂದ ಅಬುಧಾಬಿಗೆ ಹೋಗುತ್ತಿದ್ದ ಇಂಡಿಗೊ ವಿಮಾನವು ಹೈಡ್ರಾಲಿಕ್ ವೈಫಲ್ಯದ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 155 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನ ರಾತ್ರಿ 10:42 ಕ್ಕೆ ದೆಹಲಿಗೆ ಬಂದಿಳಿಯಿತು.

ಎರಡು ವಾರಗಳ ಹಿಂದೆ ದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿಗೆ ಡಿಕ್ಕಿ ಹೊಡೆದ ನಂತರ ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

ಅಷ್ಟೇ ಅಲ್ಲ, ಆಗಸ್ಟ್ ನಲ್ಲಿ ಪ್ರಯಾಣಿಕರ ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಮತ್ತೊಂದು ಇಂಡಿಗೊ ವಿಮಾನವು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಮುಂಬೈನಿಂದ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನಿಗೆ ರಕ್ತ ವಾಂತಿಯಾಗಿತ್ತು. ಆಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಇತ್ತೀಚಿನ ಸುದ್ದಿ

Exit mobile version