ಕಾಲೇಜು ಸಮಸ್ಯೆ ಹೇಳಿಕೊಳ್ಳಲು ಹೋದಾಗ ಪ್ರಾಂಶುಪಾಲರಿಂದ ನಿಂದನೆ: ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ
ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ಎಬಿವಿಪಿ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರು ಕೊಠಡಿಯಿಂದ ಹೊರದಬ್ಬಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಮಂಗಳೂರು ನಗರದ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ.
ವಿದ್ಯಾರ್ಥಿಗಳ ಸಮಸ್ಯೆಯ ಕುರಿತಾಗಿ ಕೆಪಿಟಿ ಕಾಲೇಜಿನ ಪ್ರಾಂಶುಪಾಲರ ಬಳಿ ಚರ್ಚಿಸಲು ವಿದ್ಯಾರ್ಥಿ ಪರಿಷತ್ ನ ಪ್ರಮುಖ ಕಾರ್ಯಕರ್ತರು ತೆರಳಿದಾಗ ವಿದ್ಯಾರ್ಥಿಗಳನ್ನು ನಿಂದಿಸಿ , ಪರಿಷತ್ ನ ಕಾರ್ಯಕರ್ತರಿಗೆ ಕಾಲೇಜಿನ ವಿದ್ಯಾರ್ಥಿಗಳಿಂದ ಹೊಡೆಸುವುದಾಗಿ ಹೇಳಿದಾಗ ಕೆರಳಿದ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಕಾಲೇಜಿನ ಮುಂಬಾಗದಲ್ಲೆ ಪ್ರತಿಭಟನೆಯನ್ನು ಪ್ರಾರಂಭಿಸಿದರು.
ಪ್ರತಿಭಟನಾ ಸ್ಥಳಕ್ಕೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಮಾತುಕತೆ ನಡೆಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka