10:47 AM Thursday 4 - September 2025

ಮಲ್ಲಿಕಾರ್ಜುನ ಖರ್ಗೆಯ ನಿಂದನೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು

chakravarthy sulibele
21/01/2024

ಕಲಬುರಗಿ:  ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಸಂಘಟನೆಯ ಮುಖಂಡ ಚಕ್ರವರ್ತಿ ಸೂಲಿಬೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿಯಲ್ಲಿ ಅವರ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಅವರು ಈ ಬಗ್ಗೆ ದೂರು ನೀಡಿದ್ದು, ಸೂಲಿಬೆಲೆ ಅವರು ಕಳೆದ ಹಲವು ವರ್ಷಗಳಿಂದ ಬಿಜೆಪಿ ವಿರೋಧಿ ನಾಯಕರನ್ನು ತಮ್ಮ ಭಾಷಣದಲ್ಲಿ ಅವಹೇಳನ ಮಾಡುತ್ತಿದ್ದಾರೆ. ಕೋಮು ದ್ವೇಷದ ನೆಲೆಗಟ್ಟಿನಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ದೂರಿನನ್ವಯ ಪೊಲೀಸರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಂ 353, 338, 352, 342, 153(ಬಿ), 259(ಎ) 505 ಮತ್ತು 3(2) ಐಪಿಸಿ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

Exit mobile version