ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ | ತಾಲೂಕು ಅಭ್ಯಾಸ ವರ್ಗ-2022 - Mahanayaka

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ | ತಾಲೂಕು ಅಭ್ಯಾಸ ವರ್ಗ-2022

abvp
06/02/2022


Provided by

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP)  ಇದರ ತಾಲೂಕು ಅಭ್ಯಾಸ ವರ್ಗವು ಶನಿವಾರ ಬಿ.ಸಿ ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು  ನಿವೃತ್ತ ಯೋಧರು, ಇಂಡಿಯಾನಾ ಹಾಸ್ಪಿಟಲ್ ಮಂಗಳೂರು ಇಲ್ಲಿಯ Physiotherapy ವಿಭಾಗದ ಮುಖ್ಯಸ್ಥರಾದ ಡಾ.ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ  ಡಾ.ವೆಂಕಟೇಶ್ ಕುಂಪಲ ಅವರನ್ನು ವಿದ್ಯಾರ್ಥಿ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಶ್ರೀ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು.

ಅಭ್ಯಾಸ ವರ್ಗದ ಮೊದಲ ಅವಧಿಯಾದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ನಡೆಸಿಕೊಟ್ಟರು. ಎರಡನೇ ಅವಧಿ, ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ  ಮಜಕ್ಕಾರ್ ಇವರು ನಡೆಸಿಕೊಟ್ಟರು. ಅಭ್ಯಾಸ ವರ್ಗದ ಮೂರನೇ ಅವಧಿ ಹೋರಾಟವನ್ನು ಚಟುವಟಿಕೆಗಳ ಮೂಲಕ ಪ್ರಾತ್ಯಕ್ಷಿಕೆ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ ನಡೆಸಿಕೊಟ್ಟರು.

ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು.  ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲಾಶ್ ಉಪಸ್ಥಿತರಿದ್ದರು..  ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜೈಲಿನಂತೆ ಕಾಲೇಜಿನಲ್ಲಿ ಹಿಂದೂ-ಮುಸ್ಲಿಮರ ನಡುವೆ ಗೋಡೆ ನಿರ್ಮಾಣದ ಯತ್ನ: ಮುನೀರ್‌ ಕಾಟಿಪಳ್ಳ

ಕೊವಿಡ್ ನಿಂದ ಮೃತಪಟ್ಟ ಅಣ್ಣ: ವಿಧವೆ ಅತ್ತಿಗೆಯನ್ನು ವಿವಾಹವಾದ ಸಹೋದರ

ಹಾಸನಕ್ಕೂ ವ್ಯಾಪಿಸಿದ ಹಿಜಾಬ್-ಕೇಸರಿ ವಿವಾದ!

ಬಿಜೆಪಿ ಸೋಲಿಸಿ, ಸಿಎಂ ಯೋಗಿಯನ್ನು ಉತ್ತರಾಖಂಡಕ್ಕೆ ವಾಪಸ್ ಕಳುಹಿಸಿ: ಅಖಿಲೇಶ್ ಯಾದವ್

ಕೌಟುಂಬಿಕ ಹಿಂಸಾಚಾರ ಆರೋಪ: ಅಧಿಕಾರ ವಹಿಸಿಕೊಂಡ ಮೂರೇ ದಿನದಲ್ಲಿ ಪೆರು ಪ್ರಧಾನಿ ವಜಾ

ಇತ್ತೀಚಿನ ಸುದ್ದಿ