ಬೆಳ್ತಂಗಡಿ: ಆಟೋ—ಬೈಕ್ ನಡುವೆ ಅಪಘಾತ: ವಿದ್ಯಾರ್ಥಿಯ ದಾರುಣ ಸಾವು - Mahanayaka

ಬೆಳ್ತಂಗಡಿ: ಆಟೋ—ಬೈಕ್ ನಡುವೆ ಅಪಘಾತ: ವಿದ್ಯಾರ್ಥಿಯ ದಾರುಣ ಸಾವು

shivaprasad
24/11/2022


Provided by

ಬೆಳ್ತಂಗಡಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತ ವ್ಯಕ್ತಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ.ವಿದ್ಯಾರ್ಥಿ  ಪಾರಂಕಿ ಗ್ರಾಮದ ನಿವಾಸಿ ವಸಂತ ನಾಯಕ್ ಎಂಬವರ ಪುತ್ರ ಶಿವಪ್ರಸಾದ್ (19)ಎಂಬವರಾಗಿದ್ದಾರೆ.

ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ಅಟೋ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿಯ ವೇಳೆ ಅವರು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ