ಕಾರು—ಲಾರಿ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು - Mahanayaka

ಕಾರು—ಲಾರಿ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

car lorry accident
06/05/2025

ಹುಬ್ಬಳ್ಳಿ: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿ–ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ(29), ಅಂಜಲಿ(26), ಸಂದೀಪ್(26), ವಿಠಲ್(55) ಶಶಿಕಲಾ(40) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಕಾರಿನಲ್ಲಿದ್ದವರು ಹೊಟೇಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು. ಕುಸುಗಲ್ ಗ್ರಾಮದ ಇಂಗಳಹಳ್ಳಿ ಕ್ರಾಸ್ ಬಳಿ ಕಾರು ಮತ್ತು ಕಾರಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


Provided by

ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ