ಕಾರು- ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು, ಹೊತ್ತಿ ಉರಿದ ಬೈಕ್ - Mahanayaka
12:41 PM Friday 19 - December 2025

ಕಾರು– ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು, ಹೊತ್ತಿ ಉರಿದ ಬೈಕ್

chikkamagaluru
14/07/2023

ಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ ನಡೆದಿದೆ.

ಹೊಸದುರ್ಗ ಮೂಲದ ಲೋಹಿತ್ (33) ನಾಗರಾಜ್ (35) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಿಕ್ಕಮಗಳೂರಿನಿಂದ ಕಡೂರು‌ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಬೈಕ್ ಹೊತ್ತಿ ಉರಿದಿದೆ. ಘಟನೆಯ ಭೀಕರ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ