ಟಿಪ್ಪರ್—ಬೈಕ್ ನಡುವೆ ಅಪಘಾತ: ಅಜ್ಜ, ಮೊಮ್ಮಗ ಸ್ಥಳದಲ್ಲೇ ಸಾವು
![ramanagara](https://www.mahanayaka.in/wp-content/uploads/2024/06/ramanagara.jpg)
02/06/2024
ರಾಮನಗರ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಜ್ಜ ಹಾಗೂ ಮೊಮ್ಮಗ ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ನಡೆದಿದೆ.
ಕನಕಪುರ ಮೂಲದ ಯಶಸ್ಸ್(10) ಹಾಗೂ ಚಿಕ್ಕಣ್ಣ(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಾಮನಗರದಿಂದ ಬಿಡದಿಯ ಮಗನ ಮನೆಗೆ ಮೊಮ್ಮಗನನ್ನು ಅಜ್ಜ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜ ಬೈಕ್ ನಿಂದ ಎಸೆಯಲ್ಪಟ್ಟಿದ್ದು, ಮೊಮ್ಮಗನ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದಿದೆ. ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ರಾಮನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: