ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಇಬ್ಬರಿಗೆ ಗಾಯ

ಬೈಕ್ ಹಾಗೂ ದ್ವಿಚಕ್ರ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹಳೆಗೇಟು ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಮೂಲತಃ ಮಂಡ್ಯ ನಿವಾಸಿ ಮಹೇಶ (37) ಹಾಗೂ ದ್ವಿಚಕ್ರ ವಾಹನ ಸವಾರ ಬನ್ನೂರು ನಿವಾಸಿ ಬಿಜು ಕುಮಾರ್ (47) ಗಾಯಗೊಂಡವರು. ಇವೆರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಈ ಸಂದರ್ಭ ಸವಾರರು ರಸ್ತೆಗೆಸೆಯಲ್ಪಟ್ಟು, ಗಾಯಗೊಂಡಿದ್ದಾರೆ.
ಮಹೇಶ್ ಜೆಸಿಬಿಯಲ್ಲಿ ಕೆಲಸ ಮಾಡುತ್ತಿದ್ದು, ಗಂಭೀರ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಹಾಗೂ ಬಿಜು ಕುಮಾರ್ ರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw