10:27 PM Friday 12 - December 2025

ಮಳೆಯಿಂದಾಗಿ ಅಪಘಾತ: ಕಾರಿಗೆ KSRTC ಬಸ್ ಡಿಕ್ಕಿ

moodigere
20/05/2025

ಮೂಡಿಗೆರೆ:  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ KSRTC ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ನುಗ್ಗಿದ ಘಟನೆ ಇಂದು ನಡೆದಿದೆ.

ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಹಾಗೂ ಇನ್ನಿತರ ಕಡೆ  ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಸಂದರ್ಭದಲ್ಲೇ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಎದುರಿನಿಂದ ಬಂದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಂತರ ರಸ್ತೆ ಬದಿಗೆ ಜಾರಿದೆ.

ಈ ಅಪಘಾತದಲ್ಲಿ ಕಾರು ಚಾಲಕ ಸೇರಿ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.  ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version