ದುಬೈನಲ್ಲಿ ಭೀಕರ ಅಪಘಾತ: ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು! - Mahanayaka

ದುಬೈನಲ್ಲಿ ಭೀಕರ ಅಪಘಾತ: ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು!

oman
30/08/2024

ಬೆಳಗಾವಿ: ದುಬೈನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕದ ಬೆಳಗಾವಿ ಮೂಲದ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ದುಬೈನ ಓಮಾನ್ ಗೆ ಪ್ರವಾಸಕ್ಕೆ ತೆರಳಿದ್ದ ವೇಳೆ ಹೈಮಾ ಎಂಬ ಪ್ರದೇಶದಲ್ಲಿ ಇವರು ಚಲಿಸುತ್ತಿದ್ದ ಕಾರಿಗೆ ಲಾರಿಯೊಂದು ಅಪ್ಪಳಿಸಿದೆ.

ಅಪಘಾತದ ತೀವ್ರತೆಗೆ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಮೃತದೇಹಗಳನ್ನು ಭಾರತಕ್ಕೆ ತರಲು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ