ಮಲೆ ಮಾದೇಶ್ವರ ಬೆಟ್ಟದಲ್ಲಿ ಪೂಜೆ ಮುಗಿಸಿ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಮಗು ಸಾವು,  6 ಮಂದಿಗೆ ಗಾಯ - Mahanayaka

ಮಲೆ ಮಾದೇಶ್ವರ ಬೆಟ್ಟದಲ್ಲಿ ಪೂಜೆ ಮುಗಿಸಿ ತೆರಳುತ್ತಿದ್ದ ವೇಳೆ ಭೀಕರ ಅಪಘಾತ: ಮಗು ಸಾವು,  6 ಮಂದಿಗೆ ಗಾಯ

accident in hanuru
22/12/2022


Provided by

ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ.

ಮೈಸೂರು ತಾಲೂಕು ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಮೃತಪಟ್ಟ ಮಗು. ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೇಯಮ್ಮ ಹಾಗೂ ಚಾಲಕ ವೆಂಕಟೇಶ್ ಎಂಬವರೇ ಗಾಯಗೊಂಡವರು.

ಮಲೆ ಮಾದೇಶ್ವರ ಬೆಟ್ಟದಲ್ಲಿ  ಪೂಜೆ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಲೂಕಿನ    ಮಂಗಲ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಹೊಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹನೂರು ಪೊಲೀಸರು ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಸಮೀಪದ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka


LIVE

ಇತ್ತೀಚಿನ ಸುದ್ದಿ