ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು - Mahanayaka

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

crime news
23/12/2022


Provided by

ಪಾದಚಾರಿಗೆ  ಖಾಸಗಿ ಬಸ್ ಡಿಕ್ಕಿ‌ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ‌ ಸಂತೇಮರಹಳ್ಳಿಯ ಯಳಂದೂರು ರಸ್ತೆಯಲ್ಲಿ ನಡೆದಿದೆ.


Provided by

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ 35 ವರ್ಷದ ನಾಗೇಂದ್ರ ಮೃತ ದುರ್ದೈವಿ. ‌ ಸಂತೆಮರಹಳ್ಳಿಯ ಕಾವೇರಿ ಪೈಪ್ ಲೈನ್ ಕಾಮಗಾರಿಯಲ್ಲಿ ಈತ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ರಸ್ತೆಬದಿ ನಿಂತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಸಂಬಂಧ ಸಂತೆಮರಹಳ್ಳಿ ಪಿಎಸ್ ಐ ಟಿ.ಎಂ.ತಾಜುದ್ದೀನ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ‌  ಕೈಗೊಂಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ