ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಅಪಘಾತದ ದೃಶ್ಯ ಕಂಡು ಬೆಚ್ಚಿಬಿದ್ದ ಜನ - Mahanayaka

ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಅಪಘಾತದ ದೃಶ್ಯ ಕಂಡು ಬೆಚ್ಚಿಬಿದ್ದ ಜನ

chikkaballapur
07/06/2024


Provided by

ಚಿಕ್ಕಬಳ್ಳಾಪುರ:  ಭೀಕರ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ‌ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೆಪಿಟಿಸಿಎಲ್ ವೇಣುಗೋಪಾಲ್ (34), ಶ್ರೀಧರ್ (35), ಬೆಸ್ಕಾಂ ಲೈನ್​ಮ್ಯಾನ್ ಮಂಜಪ್ಪ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಒಬ್ಬ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ.

ಕಳೆದ ರಾತ್ರಿ ಈ ಭೀಕರ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಈ  ಅಪಘಾತ ಸಂಭವಿಸಿದೆ.

ಬೆಸ್ಕಾಂ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬ್ರಿಜಾ ಕಾರು ಅಪಘಾತಕ್ಕೀಡಾದ ಕಾರಾಗಿದೆ. ಅಪಘಾತದ ತೀವ್ರತೆಗೆ ಒಬ್ಬ ಪ್ರಯಾಣಿಕನ ಮೃತದೇಹ ಮರಕ್ಕೆ ಸಿಲುಕಿ ನೇತುಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JuQTBF5KG6PG6v5YZnySxb

ಇತ್ತೀಚಿನ ಸುದ್ದಿ