ಅತ್ಯಾಚಾರ ಎಸಗಲು ಕರೆದೊಯ್ಯುತ್ತಿದ್ದ ವೇಳೆ ಅಪಘಾತ: ಬಾಲಕಿ ಸಾವು, ನಾಲ್ವರ ಬಂಧನ
ಬೆಂಗಳೂರು: ಬಾಲಕಿಯನ್ನು ಅತ್ಯಾಚಾರ ಎಸಗಲು ಕರೆದೊಯ್ಯುತ್ತಿದ್ದ ವೇಳೆ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆಯೊಂದು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಅಜಯ್ ಅಲಿಯಾಸ್ ಮನೋಜ್, ಇರ್ಫಾನ್, ಮುಬಾರಕ್ ಹಾಗೂ ಒಬ್ಬ ಅಪ್ರಾಪ್ತ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವರದಿಗಳ ಪ್ರಕಾರ, ಅತ್ಯಾಚಾರ ಎಸಗುವ ಉದ್ದೇಶದಿಂದ 9ನೇ ತರಗತಿಯ ಬಾಲಕಿಯನ್ನು ಬಲವಂತವಾಗಿ ಬೈಕ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಒಟ್ಟು ಎರಡು ಬೈಕ್ ನಲ್ಲಿ ಆರೋಪಿಗಳು ತೆರಳಿದ್ದರು. ಒಂದು ಬೈಕ್ನಲ್ಲಿ ಅಜಯ್, ಬಾಲಕಿ ಮತ್ತು ಇನ್ನೊಬ್ಬ ಇದ್ದ ಎನ್ನಲಾಗಿದೆ. ಹೊಸಕೋಟೆ ಮಾರ್ಗವಾಗಿ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಈ ವೇಳೆ ಬಾಲಕಿ ಸಾವನ್ನಪ್ಪಿದ್ದಾಳೆ. ಬೈಕ್ ನಲ್ಲಿದ್ದ ಉಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಕ್ಟೋಬರ್ 24ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸದ್ಯ ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಬಂಧಿಸಿ ಜೈಲಿಗಟ್ಟಲಾಗಿದೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD






















