ಓವರ್ ಟೇಕ್ ವೇಳೆ ಅಪಘಾತ: ಮೂವರು ಸ್ಥಳದಲ್ಲೇ ಸಾವು
ಶಿವಮೊಗ್ಗ: ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ನಡೆದಿದೆ.
ಆಯನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಶಿಫ್ಟ್ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಸಿಗಂದೂರಿಗೆ ಹೋಗುತ್ತಿದ್ದ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದವರು ಎಂದು ಹೇಳಲಾಗಿದ್ದು, ಈ ಕಾರು ಚಿತ್ರದುರ್ಗ ಮೂಲದ್ದು ಎಂದು ಹೇಳಲಾಗಿದೆ.
ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದರೆ, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಒಟ್ಟು ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓವರ್ ಟೇಕ್ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97

























