ಅಪರಿಚಿತ ವಾಹನ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ ಕಡವೆ ರಕ್ಷಣೆ

ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಸುಂದರ ಬೈಲ್ ಎಂಬಲ್ಲಿ ಅಪರಿಚಿತ ವಾಹನವೊಂದು ಕಡವೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಕಡವಿಯು ಗಾಯಗೊಂಡ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಡವೆಗೆ ತಕ್ಷಣವೇ ಉಪ ವಲಯ ಅರಣ್ಯಾಧಿಕಾರಿ ರಂಜಿತ್, ಗಸ್ತು ಅರಣ್ಯ ಪಾಲಕರಾದ ಅಭಿಜಿತ್, ಶಂಕರ್, ನವರಾಜ್, ಮತ್ತು ಪಶು ಇಲಾಖೆ ವೈದ್ಯಾಧಿಕಾರಿ ನವೀನ್ ಸ್ಥಳಕ್ಕಾಗಮಿಸಿ ಚಿಕಿತ್ಸೆ ನೀಡಿ. ಕಡವೆ ಚೇತರಿಸಿಕೊಂಡ ನಂತರ ತತ್ಕೊಳ ಅರಣ್ಯಕ್ಕೆ ಕಡವೆಯನ್ನು ಬಿಡಲಾಯಿತು.
ಸ್ಥಳೀಯರ ಸಮಯ ಪ್ರಜ್ಞೆಯಿಂದ ಕಡವೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯರಾದ ಮದನ್ ಶೆಟ್ಟಿ, ಸಂದೀಪ್, ಸುಬ್ರಾಯ ಗೌಡ ಬಿದರುತಳ ಮೊದಲಾದವರು ಇದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD