ಆಕಸ್ಮಿಕ ಬೆಂಕಿ ಗೂಡ್ಸ್ ಟಾಟಾ ಎಸಿ ವಾಹನ ಬೆಂಕಿಗಾಹುತಿ

13/07/2023
ಹನೂರು: ತಾಲೂಕಿನ ಅಜ್ಜೀಪುರ ಗ್ರಾಮದಿಂದ ಹನೂರು ಪಟ್ಟಣಕ್ಕೆ ಟಾಟಾ ಎಸಿ ವಾಹನ ತೆರಳುತ್ತಿದ್ದ ವೇಳೆ ಆಂಜನೇಯ ದೇವಾಲಯದ ಸಮೀಪ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ವಾಹನ ಚಲಾಯಿಸುತ್ತಿದ್ದ ಚಾಲಕ ರಾಜು ಹಾಗೂ ಮಾಲೀಕ ಸಿದ್ದೇಗೌಡ ವಾಹನದಿಂದ ಇಳಿದು ತಮ್ಮ ಜೀವವನ್ನು ರಕ್ಷಿಸಿಕೊಂಡಿದ್ದಾರೆ.
ಗೂಡ್ಸ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ ತಕ್ಷಣ ಸ್ಥಳ ಆಗಮಿಸಿದ ಅಗ್ನಿಶಾಮಕ ಠಾಣಾಧಿಕಾರಿ ಪ್ರಶಾಂತ್ ಹಾಗೂ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw