ಕಲಬುರಗಿ: ಅಫ್ಝಲ್ ಪುರ ಪೊಲೀಸ್ ಠಾಣೆ ಲಾಕಪ್ ನಿಂದ ಪೋಕ್ಸೊ ಪ್ರಕರಣದ ಆರೋಪಿ ಪರಾರಿ!

pocso act.jpg
03/07/2026

ಕಲಬುರಗಿ: ಜಿಲ್ಲೆಯ ಅಫ್ಝಲ್ ಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಪ್ರಕರಣದಡಿ ಬಂಧಿತನಾಗಿದ್ದ ಆರೋಪಿಯೊಬ್ಬ ಗುರುವಾರ ಮಧ್ಯರಾತ್ರಿ ಪೊಲೀಸ್ ಠಾಣೆಯ ಲಾಕಪ್ ನಿಂದಲೇ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಪೋಕ್ಸೊ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು ಒಂದು ವಾರದ ಹಿಂದೆ ಮಂಜುನಾಥ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ, ಅಫ್ಝಲ್ ಪುರ ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು. ಆದರೆ, ಗುರುವಾರ ಮಧ್ಯರಾತ್ರಿ ಎಲ್ಲರ ಕಣ್ಣು ತಪ್ಪಿಸಿ ಆತ ಲಾಕಪ್ ನಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ ಮಂಜುನಾಥ್ ಠಾಣೆಯಿಂದ ಓಡಿ ಹೋಗುತ್ತಿರುವ ದೃಶ್ಯಗಳು ಸ್ಥಳೀಯ ಅಂಗಡಿ ಮುಂಗಟ್ಟುಗಳ ಸಿಸಿಟಿವಿ (CCTV) ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಸದ್ಯ ಪೊಲೀಸ್ ಉನ್ನತಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ.

ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯಲ್ಲೇ ಪೊಲೀಸ್ ಕಾವಲು ದಾಟಿ ಆರೋಪಿ ಪರಾರಿಯಾಗಿರುವ ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸ್ ಇಲಾಖೆಯ ಭದ್ರತೆಯ ಕುರಿತು ಪ್ರಶ್ನೆಗಳು ಮೂಡುವಂತೆ ಮಾಡಿದೆ.


 

ಇತ್ತೀಚಿನ ಸುದ್ದಿ

Exit mobile version