ಅನೈತಿಕ ಸಂಬಂಧಕ್ಕೆ ಪತ್ನಿ ಅಡ್ಡಿ ಎಂದು ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಆರೋಪ: ಪತಿಯ ಲವರ್ ಜೊತೆ ಪತ್ನಿ ಮಾತನಾಡಿದ ಆಡಿಯೋ ಪತ್ತೆ - Mahanayaka
3:46 AM Sunday 14 - September 2025

ಅನೈತಿಕ ಸಂಬಂಧಕ್ಕೆ ಪತ್ನಿ ಅಡ್ಡಿ ಎಂದು ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಆರೋಪ: ಪತಿಯ ಲವರ್ ಜೊತೆ ಪತ್ನಿ ಮಾತನಾಡಿದ ಆಡಿಯೋ ಪತ್ತೆ

chikkamagaluru
14/12/2023

ಚಿಕ್ಕಮಗಳೂರು: ತನ್ನ ಅನೈತಿಕ ಸಂಬಂಧಕ್ಕೆ ಪತ್ನಿ ಅಡ್ಡಿಯಾಗುತ್ತಿದ್ದಾಳೆ ಎಂದು ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಚಿಕ್ಕಮಗಳೂರಿನಲ್ಲಿ ಕೇಳಿ ಬಂದಿದೆ. ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಪತಿಯೇ ವಿಷದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಮೃತ ಗೃಹಿಣಿ ಪೋಷಕರು ಆರೋಪ ಮಾಡಿದ್ದಾರೆ. ಶ್ವೇತಾ(31) ಮೃತ ದುರ್ದೈವಿ.


Provided by

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ದೇವವೃಂದದಲ್ಲಿ ವಿಷದ ಇಂಜೆಕ್ಷನ್ ಚುಚ್ಚಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಶ್ವೇತಾ ಮೃತಪಟ್ಟಿದ್ದಾಳೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಶ್ವೇತಾಳನ್ನು ಪತಿ ದರ್ಶನ್ ಕೊಲೆ ಮಾಡಿದ್ದಾನೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹಾರ್ಟ್ ಅಟ್ಯಾಕ್ ಆಗಿದೆ ಎಂದು ಪತ್ನಿ ಪೋಷಕರಿಗೆ ಪತಿ ದರ್ಶನ್ ಮಾಹಿತಿ ನೀಡಿದ್ದ ಅಷ್ಟೇ ಅಲ್ಲ ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪತಿ ದರ್ಶನ್ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. 7 ವರ್ಷದ ಹಿಂದೆ ದರ್ಶನ್ ಜೊತೆ ಶ್ವೇತಾ ವಿವಾಹವಾಗಿತ್ತು. ದರ್ಶನ್, ಶ್ವೇತಾ ದಂಪತಿಗೆ 4 ವರ್ಷದ ಗಂಡು ಮಗು ಇದೆ. 4 ದಿನದ ಹಿಂದೆ ದಂಪತಿ ಬೆಂಗಳೂರಿನಿಂದ ದೇವವೃಂದಕ್ಕೆ ಬಂದಿದ್ದರು. ಅನೈತಿಕ ಸಂಬಂಧದ ಬಗ್ಗೆ ಶ್ವೇತಾ ತನ್ನ ಪೋಷಕರಿಗೆ ಆಡಿಯೋ ಕಳಿಸಿದ್ದಳು. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಸಂಬಂಧ ಗೋಣಿಬೀಡು ಠಾಣೆಯಲ್ಲಿ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ