ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪ: ಯುವಕ ಅರೆಸ್ಟ್ - Mahanayaka
5:33 PM Saturday 25 - October 2025

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪ: ಯುವಕ ಅರೆಸ್ಟ್

harshith shetty
24/07/2023

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹರ್ಷಿತ್ ಶೆಟ್ಟಿ (29) ಎಂದು ಗುರುತಿಸಲಾಗಿದೆ.

ಈತನಿಂದ 25 ಗ್ರಾಂ ತೂಕದ ರೂ. 1,25,000 ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಮೊಬೈಲ್ , 1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,35,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಎಂಡಿಎಂಎಯನ್ನು ಖರೀದಿಸಿಕೊಂಡು ನಗರದ ಪಡೀಲ್ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ