ನೇಜಾರು ನಾಲ್ವರ ಬರ್ಬರ ಹತ್ಯೆ ಪ್ರಕರಣ: ಎರಡನೇ ಬಾರಿಗೆ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ

ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಮತ್ತೊಮ್ಮೆ ತಿರಸ್ಕರಿಸಿದೆ.
ಪ್ರವೀಣ್ ಚೌಗುಲೆ ಎರಡನೇ ಬಾರಿಗೆ ಜಾಮೀನು ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ.
ಮಾರ್ಚ್ 13ರಂದು ಚೌಗುಲೆ ಎರಡನೇ ಬಾರಿಗೆ ಜಾಮೀನು ಅರ್ಜಿ ಸಲ್ಲಿಸಿದ್ದ. ಈ ಅರ್ಜಿಗೆ ವಿಶೇಷ ಸರ್ಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾರ್ಚ್ 27ರಂದು ಆಕ್ಷೇಪಣೆ ಸಲ್ಲಿಸಿದ್ದರು. ವಾದ ವಿವಾದದ ಬಳಿಕ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಜಾಮೀನು ಅರ್ಜಿಗೆ ಸಂಬಂಧಿಸಿದ ಅಂತಿಮ ಆದೇಶವನ್ನು ಮಾರ್ಚ್ 30ಕ್ಕೆ ನಿಗದಿಪಡಿಸಿ ಆದೇಶ ನೀಡಿದರು.
ಆರೋಪಿಗೆ ಜಾಮೀನು ನೀಡಿದರೆ ಸಾಕ್ಷಿಗಳನ್ನು ಹೆದರಿಸುವ ಸಾಧ್ಯತೆಗಳಿರುವ ಹಿನ್ನೆಲೆ ಹಾಗೂ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗೆ ನ್ಯಾಯಾಂಗ ಬಂಧನದಲ್ಲೂ ಚಿಕಿತ್ಸೆ ಪಡೆಯುವ ಅವಕಾಶ ಇರುವುದರಿಂದ ಜಮೀನು ಅರ್ಜಿ ತಿರಸ್ಕರಿಸಿರುವುದಾಗಿ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth