ವೃದ್ಧೆ ಒಬ್ಬಂಟಿಯಾಗಿದ್ದಾಗ ಮನೆಗೆ ನುಗ್ಗಿ ಸರ ಕದ್ದಿದ್ದ ಆರೋಪಿಯ ಬಂಧನ
ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ಎಂಬಲ್ಲಿ ವೃದ್ಧ ಮಹಿಳೆಯೊಬ್ಬರು ಒಬ್ಬಂಟಿಯಾಗಿ ಮನೆಯಲ್ಲಿ ಇದ್ದ ಸಂದರ್ಭ ಅವರ ಕುತ್ತಿಗೆಯಿಂದ ಚಿನ್ನದ ಸರ ದರೋಡೆ ಪ್ರಕರಣ ನಡೆದಿತ್ತು.
ಈ ಕೇಸ್ ಆರೋಪಿತ ಸಲೀಂ ಪಿ.ಎ. (34) ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 28ರಂದು ಬೆಳಿಗ್ಗೆ 10:30ಕ್ಕೆ ಓರ್ವ ಅಪರಿಚಿತ ವ್ಯಕ್ತಿ ಜಾಲ್ಸೂರು ಗ್ರಾಮದ ಶ್ರೀಮತಿ ಕಮಲ (64) ಎಂಬುವವರ ಮನೆಗೆ ಹೋಗಿ ನೀರು ಕೇಳುವ ನೆಪದಲ್ಲಿ ಮನೆಯ ಒಳಗೆ ಪ್ರವೇಶಿಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುವುದಾಗಿ ಅವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದರು.
ಈ ಬಗ್ಗೆ ವಿಶೇಷ ತಂಡ ರಚಿಸಿದ ಪೋಲೀಸರು ಕೇರಳದ ದೇಲಂಪಾಡಿ ಗ್ರಾಮದ ಕೊಟ್ಯಾಡಿ ಬಳಿ ಗುರುವಾರ ಆರೋಪಿ ಸಲೀಂನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಆರೋಪಿಯು ವೃದ್ದ ಮಹಿಳೆಯ ಕುತ್ತಿಗೆಯಿಂದ ಕಿತ್ತುಕೊಂಡು ಹೋಗಿದ್ದ 45,000 ಮೌಲ್ಯದ ಚಿನ್ನದ ಸರದ ತುಂಡು ಹಾಗೂ ಅತ ಕೃತ್ಯಕ್ಕೆ ಬಳಸಿದ ಬೈಕ್ ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿ ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka