ಪತ್ನಿಯನ್ನು ಕೊಂದು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ - Mahanayaka

ಪತ್ನಿಯನ್ನು ಕೊಂದು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

avinash keerthi
29/05/2025


Provided by

ಚಿಕ್ಕಮಗಳೂರು: ಪತ್ನಿಯನ್ನು ಕೊಂದು ಕಾಡಿಗೆ ಪರಾರಿಯಾಗಿದ್ದ ಪತಿಯನ್ನು  ಪೊಲೀಸರು ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಿದ್ದಾರೆ.

32 ವರ್ಷದ ಅವಿನಾಶ್  ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ಮಧ್ಯಾಹ್ನ  ಪತ್ನಿ ಕೀರ್ತಿಯನ್ನು ಸುಮಾರು  10 ಬಾರಿ ಚಾಕುವಿನಿಂದ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ ಬಳಿಕ ಈತ ಪರಾರಿಯಾಗಿದ್ದು, ಮುಳ್ಳಯ್ಯನಗಿರಿ ಕಾಡಿನಲ್ಲಿ ಅಡಗಿ ಕುಳಿತಿದ್ದ.

ಇತ್ತ ರಾಜೇಶ್ ನೇತೃತ್ವದ ಪೊಲೀಸರ ಸ್ಪೆಷಲ್ ಟೀಮ್ ಮುಳ್ಳಯ್ಯನಗಿರಿ ಕಾಡಿನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಚಾಕುವಿನಿಂದ ಚುಚ್ಚಿ ಬರ್ಬರ ಹತ್ಯೆ!

ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿತ್ತು. ನಾಲ್ಕು ವರ್ಷಗಳ ಹಿಂದೆ ಅವಿನಾಶ್ ಮತ್ತು ಕೀರ್ತಿ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಕೌಟುಂಬಿಕ ಬಳಿಕ ಇವರಿಬ್ಬರ ನಡುವೆ ಜಗಳ ನಡೆಯುತ್ತಿದ್ದು, ನಿನ್ನೆ ಮಧ್ಯಾಹ್ನ ಅವಿನಾಶ್ ಕೀರ್ತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದ.

ಈ ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗಾಗಿ ರಾಜೇಶ್ ನೇತೃತ್ವದ ಸ್ಪೆಷಲ್ ಟೀಮ್ ಶೋಧ ನಡೆಸಿತ್ತು. ಅಂತಿಮವಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ