ಟಿಪ್ಪು ಸುಲ್ತಾನ್ ಭಾವ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ಆರೋಪಿ ಅರೆಸ್ಟ್! - Mahanayaka
12:17 PM Thursday 21 - August 2025

ಟಿಪ್ಪು ಸುಲ್ತಾನ್ ಭಾವ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ಆರೋಪಿ ಅರೆಸ್ಟ್!

arest
02/02/2024


Provided by

ರಾಯಚೂರು: ಟಿಪ್ಪು ಸುಲ್ತಾನ್ ಭಾವ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಸಾರ್ವಜನಿಕ ಶಾಂತಿ ಕೆಡಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಕಾಶ್(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಕೃತ್ಯ ನಡೆದು 24 ಗಂಟೆಗಳೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜನವರಿ 31ರಂದು ಬೆಳಗ್ಗೆ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತಕ್ಕೆ ಆಕಾಶ್ ಚಪ್ಪಲಿ ಹಾರ ಹಾಕಿ ಸ್ಥಳದಿಂದ ಪರಾರಿಯಾಗಿದ್ದ. ಇದರ ವಿರುದ್ಧ ಟಿಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.

ಇದೀಗ ಆರೋಪಿ 23 ವರ್ಷ ವಯಸ್ಸಿನ ಆಕಾಶ್ ನನ್ನು ಬಂಧಿಸಲಾಗಿದೆ. ಕುಡಿತದ ಮತ್ತಿನಲ್ಲಿ ಈ ಕೃತ್ಯ ಎಸಗಿರೋದಾಗಿ ಆರೋಪಿ ದುಷ್ಕೃತ್ಯ ನಡೆಸಿರೋದಾಗಿ ಹೇಳಿದ್ದಾನೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ