ಪಾರ್ಕ್ ಮಾಡಲಾಗಿದ್ದ ಟೆಂಪೋ ಟ್ರಾವೆಲರ್ ಕದ್ದ ಆರೋಪಿಗಳು ಅರೆಸ್ಟ್ - Mahanayaka

ಪಾರ್ಕ್ ಮಾಡಲಾಗಿದ್ದ ಟೆಂಪೋ ಟ್ರಾವೆಲರ್ ಕದ್ದ ಆರೋಪಿಗಳು ಅರೆಸ್ಟ್

arest 1
23/09/2023

ಮಂಗಳೂರು: ಟೆಂಪೋ ಟ್ರಾವೆಲರ್ ಕದ್ದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆರೀಫ್ ಉಲ್ಲಾಖಾನ್ @ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ @ ಬೇಬಿ, ಸುರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಇವರಿಂದ ಕಳುವಾದ ಸುಮಾರು 15 ಲಕ್ಷ ಮೌಲ್ಯದ ಟೆಂಪೋ ಟ್ರಾವೆಲ್ಲರ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಿಕಾನ ಫ್ಲೈ ಓವರ್ ಬಳಿ ಟೆಂಪೋ ಟ್ರಾವೆಲರ್ ವಾಹನವನ್ನು ಸೆಪ್ಟೆಂಬರ್ 14 ರಂದು ವಾಹನವನ್ನು ಪಾರ್ಕ್ ಮಾಡಿದ್ದನ್ನು ಕಳ್ಳತನ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಗಳ & ವಾಹನದ ಪತ್ತೆಗಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶದಂತೆ ಹಾಗೂ ಡಿಸಿಪಿ ಸಿದ್ದಾರ್ಥ್ ಗೋಯಲ್ ಮತ್ತು ಡಿಸಿಪಿ ಸಂಚಾರ ಮತ್ತು ಅಪರಾಧ ವಿಭಾಗದ ದಿನೇಶ್ ಕುಮಾರ್ ರವರ ಮಾರ್ಗದರ್ಶನದಂತೆ ಹಾಗೂ ಎಸಿಪಿ ಕೇಂದ್ರ ಉಪ ವಿಭಾಗದ ಮಹೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಠಾಣಾ ನಿರೀಕ್ಷಕರಾದ ಭಾರತಿ ಜಿ ರವರ ಸಾರಥ್ಯದಲ್ಲಿ ವಿಶೇಷ ತಂಡವನ್ನು ರಚಿಸಿ ಉಪ ನಿರೀಕ್ಷಕರವಾದ ಹರೀಶ್ ಹೆಚ್ ವಿ, ಎಎಸ್ಐ ವಿನಯ್ ಕುಮಾರ್ ಎ ಎಸ್ ಐ ಉಲ್ಲಾಸ್ ಮಹಾಲೆ ಪೊಲೀಸ್ ಸಿಬ್ಬಂದಿಗಳಾದ ಗಿರೀಶ್ ,ಭಾಸ್ಕರ್ ,ಅಭಿಷೇಕ್ , ಪ್ರಜ್ವಲ್ ರವರುಗಳು ಬೆಳಗಾವಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ