ಲೈಂಗಿಕ ಕಿರುಕುಳ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಆರೋಪಿ ಠಾಣೆಯಲ್ಲೇ ಸಾವು! - Mahanayaka

ಲೈಂಗಿಕ ಕಿರುಕುಳ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಆರೋಪಿ ಠಾಣೆಯಲ್ಲೇ ಸಾವು!

brahmavara police
10/11/2024

ಉಡುಪಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಆರೋಪಿ ಬ್ರಹ್ಮಾವರ ಠಾಣೆಯಲ್ಲೇ ಸಾವನ್ನಪ್ಪಿದ ಘಟನೆ  ನಡೆದಿದೆ.

ಕೇರಳ ಮೂಲದ ಬಿಜು ಮೋಹನ್ (44) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಕಾರ್ಮಿಕನಾಗಿದ್ದ ಎಂದು ತಿಳಿದು ಬಂದಿದೆ.

ಸೂರಬೆಟ್ಟು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್ ನವೆಂಬರ್ 9ರಂದು ರಾತ್ರಿ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಆತನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಆರೋಪಿಯನ್ನು ಕರೆದೊಯ್ದಿದ್ದರು.

ಬಿಜು ಮೋಹನ್ ಮದ್ಯ ಸೇವಿಸಿದ್ದ ಎಂದು ಹೇಳಲಾಗಿದ್ದು, ಆತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ಸೆಲ್ ನಲ್ಲಿ ಇರಿಸಿದ್ದರು. ಭಾನುವಾರ ನಸುಕಿನ ವೇಳೆ 3:30ರ ಸುಮಾರಿಗೆ ಆತ ಸೆಲ್ ನೊಳಗೆ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣವೇ  ಬ್ರಹ್ಮಾವರ ಪ್ರಾಥಿಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪರಿಶೀಲನೆ ನಡೆಸಿದ ವೇಳೆ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.


 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ