ಕಡಬ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ!

04/03/2024
ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕನೋರ್ವ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.
ಆ್ಯಸಿಡ್ ದಾಳಿಯಿಂದಾಗಿ ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿವೆ. ಆ್ಯಸಿಡ್ ಎರಚಿದ ಬಳಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷಾ ತಯಾರಿ ನಡೆಸುತ್ತಿದ್ದರು. ಈ ವೇಳೆ ಆರೋಪಿ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಇನ್ನೂ ಆರೋಪಿ ಕೇರಳ ಮೂಲದ ವ್ಯಕ್ತಿ ಎಂದು ಶಂಕೆ ವ್ಯಕ್ತವಾಗಿದೆ. ಮಾಸ್ಕ್ ಮತ್ತು ಹ್ಯಾಟ್ ಹಾಕಿಕೊಂಡು ಬಂದಿದ್ದ ದುಷ್ಕರ್ಮಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ವಿದ್ಯಾರ್ಥಿನಿಯರನ್ನು ತಕ್ಷಣವೇ ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ.